belagavi ಹುಕ್ಕೇರಿ : ಬಸ್ಸಿನಿಂದ ಜಿಗಿದು ಮಾಜಿ ಸೈನಿಕ ಆತ್ಮಹತ್ಯೆ
ಬೆಳಗಾವಿ : ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮಾಜಿ ಸೈನಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಟುರ ಗ್ರಾಮದಲ್ಲಿ ನಡೆದಿದೆ.
ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆಎಸ್) ನಿವಾಸಿ ಗೋಪಿನಾಥ್ ಜೋತಿರಾಮ ಜಾನವಾಡೆ (27) ಮೃತ ವ್ಯಕ್ತಿಯಾಗಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.
ಗೋಪಿನಾಥ್ ಜೋತಿನಾಥ್ ಜೋತಿರಾಮ ಜಾನವಾಡೆ ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್‍ನ ಹಿಂಬದಿಯ ಬಾಗಿಲು ತೆರೆದು ಜಿಗಿದಿದ್ದಾರೆ.
ಆಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಇನ್ನೊಂದು ಸಾರಿಗೆ ಬಸ್‍ನ ಟೈಯರ್ ಅಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಸಂಕೇಶ್ವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.