ಕೊಟ್ಟ ಭರವಸೆಗಳನ್ನ ಈಡೇರಿಸಿ : ಮುಖ್ಯಮಂತ್ರಿಗಳಿಗೆ ಸಾರಿಗೆ ನೌಕರರ ಪತ್ರ
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಸರ್ಕಾರ ಕೊಟ್ಟ ಭರವಸೆಗಳನ್ನ ಈಡೇರಿಸುವವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಸಾರಿಗೆ ನೌಕರರು ಪಟ್ಟು ಹಿಡಿದಿದ್ದಾರೆ.
ಇತ್ತ ಸರ್ಕಾರ ಕೂಡ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಳ್ಳದೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದೆ. ಈ ಮಧ್ಯೆ ನೌಕರರಿಗೆ ಸರ್ಕಾರ ನೀಡಿರುವ ಭರವಸೆ ಈಡೇರಿಸುವಂತೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ 6ನೇ ವೇತನ ಆಯೋಗದ ಶಿಪಾರಸ್ಸು ಅನ್ವಯ ಸಂಬಳ ನೀಡುವಂತೆ ಪತ್ರದಲ್ಲಿ ನೌಕರರು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಆರನೇ ದಿನಗಳ ಮುಷ್ಕರ ಯಶಸ್ವಿಯಾಗಿದೆ. ಅಲ್ಲೊಂದು ಇಲ್ಲೊಂದು ಬಸ್ ಹೋಗ್ತಿದೆ ಅಂತಾ ಎದೆಗುಂದುವುದು ಬೇಡ.
ನಮ್ಮ ನೌಕರರು ಯಾರು ಬಸ್ ಓಡಿಸತ್ತಿಲ್ಲ. ಖಾಸಗಿ ಚಾಲಕರನ್ನು ಕರೆದುಕೊಂಡು ಬಂದಿದ್ದಾರೆ. ಕೆಲಸ ಮಾಡಲು ಆಗದಂತಹ ಅಸಹಾಯಕರನ್ನು ಹೆದರಿಸಿ,ಬೆದರಿಸಿ ಕೆಲಸ ಮಾಡಿಸುತ್ತಿದ್ದಾರೆ.
ಮುಷ್ಕರ ಮುರಿಯಲು ಹಲವು ಪ್ರಯತ್ನ ಮಾಡುತ್ತಿದ್ದಾರೆ. ನೌಕರರು ಗೊಂದಲಕ್ಕೆ ಒಳಗಾಗಬಾರದು. ಚಳುವಳಿಯನ್ನು ಮುಂದುವರೆಸಿ, ಕುಟುಂಬ ಸಮೇತರಾಗಿ ತಟ್ಟೆ, ಲೋಟದ ಚಳುವಳಿ ಮಾಡಿ.
ಹಲವು ಸಂಘಟನೆಗಳು ಬೆಂಬಲಿಸಿವೆ. ಸಾರಿಗೆ ನೌಕರರು ಆತಂಕಕ್ಕೆ ಒಳಗಾಗೋದು ಬೇಡ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ ಕರೆಕೊಟ್ಟಿದ್ದಾರೆ.










