dharwad ಧಾರವಾಡ : ಕಾರು ಪಲ್ಟಿ, ಇಬ್ಬರು ಸಾವು
ಧಾರವಾಡ : dharwad ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡ ಸಮೀಪದ ಕೋಟೂರ ಗ್ರಾಮದಲ್ಲಿ ನಡೆದಿದೆ.
ಧಾರವಾಡ ಮುಜಮ್ಮಿಲ್ಲ ಹಾಗೂ ಮಹಝ ಮೃತ ದುರ್ದೈವಿಗಳಾಗಿದ್ದಾರೆ.
ಇಂದು ಬೆಳಗಿನ ಜಾವ ಮೂರು ಗಂಟೆಗೆ ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೇ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸದ್ಯ ಗಾಯಾಳುಗಳನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಸಲಗುತ್ತಿದೆ.
ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..










