ಕಾರವಾರ ಬಂದರಿನಲ್ಲಿದ್ದ ವಿಕ್ರಮಾದಿತ್ಯ ಹಡಗಿನಲ್ಲಿ ಅಗ್ನಿ ಅವಘಡ Karwar
ಕಾರವಾರ : ಭಾರತದ ವಿಮಾನವಾಹಕ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ.
ನೌಕೆಯಲ್ಲಿರುವ ನಾವಿಕರು ತಂಗುವ ಕೊಠಡಿಗಳಿರುವ ಭಾಗದಿಂದ ಹೊಗೆ ಬರುತ್ತಿರುವುದನ್ನು ನೌಕಾದಳದ ಸಿಬ್ಬಂದಿ ಗಮನಿಸಿದ್ದು, ಕೂಡಲೇ ಕಾರ್ಯಪ್ರೌರುತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲೆ ಎಂದು ಅಧಿಕಾರಿಗಳು ತಿಳಿಸಿದ್ದು, ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ದೊಡ್ಡ ಹಾನಿ ಸಂಭವಿಸಿಲ್ಲ. ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ಕರ್ನಾಟಕದ ಕಾರವಾರದಲ್ಲಿ ಘಟನೆ ಸಂಭವಿಸಿದೆ ಎಂದಿದ್ದಾರೆ.