ರವಿ.ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ.
ನಿನ್ನೆ ಅವರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ಇದೀಗ ವರದಿ ಪಾಸಿಟಿವ್ ಅಂತಾ ಬಂದಿದೆ. ಸದ್ಯ ಅವರು ಐಸೋಲೇಷನ್ ನಲ್ಲಿದ್ದಾರೆ.
ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದು, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿವಹಿಸಿ ಎಂದು ಮನವಿ ಮಾಡಿದ್ದಾರೆ.










