ಚಾಮರಾಜನಗರ – ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 11 ಮಂದಿ ಸಾವು
ಚಾಮರಾಜನಗರ : ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೆ 11 ಮಂದಿ ಸೋಂಕಿತರು ಸಾವನಪ್ಪಿದ್ದಾರೆ. ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 11 ಸೋಂಕಿತರು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ 9, ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಮೃತಪಟ್ಟಿದ್ದಾರೆ.
ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 4 ಮಂದಿ, ಬುಧವಾರ ಸಂಜೆ 6 ರಿಂದ ಗುರುವಾರ ಬೆಳಗ್ಗೆ 9 ಗಂಟೆಯ ತನಕ 7 ಮಂದಿ ಸಾವನ್ನಪ್ಪಿದ್ದಾರೆ.
24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 11 ಮಂದಿ ಸಾವನ್ನಪ್ಪಿದ್ದು ಗಮನಿಸಿದರೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.
ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ.
ಇತ್ತೀಚೆಗೆ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಜನ ಜನರು ಮೃತಪಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹೀಗೆ ಸೋಂಕಿತರ ಸಾವಿನ ಪ್ರಕರಣ ಹೆಚ್ಚಾಗ್ತಲೇ ಇರುವುದು ಜಿಲ್ಲೆಯ ಜನರ ಆತಂಕವನ್ನ ಹೆಚ್ಚಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








