ಗುಂಡ್ಲುಪೇಟೆ : ಕೋವಿಡ್ ಸೋಂಕಿತ ಮಹಿಳೆ ಸಾವು- ಸಂಬಂಧಿಕರಿಂದ ದಾಂಧಲೆ
ಚಾಮರಾಜನಗರ : ಕೊರೊನಾ ಸೋಂಕಿತ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು, ರೊಚ್ಚಿಗೆದ್ದ ಸಂಬಂದಿಕರು ಆಸ್ಪತ್ರೆಯಲ್ಲಿನ ಸಿಬ್ಬಂದಿಗಳ ಮೇಲೆ ಆಕ್ಸಿಜನ್ ಸಿಲಿಂಡರ್ ನಿಂದ ಹಲ್ಲೆಗೆ ಮುಂದಾಗಿ ಕಿಟಕಿ ಬಾಗಿಲು ಧ್ವಂಸ ಮಾಡಿದ ಘಟನೆ ಜಿಲ್ಲೆಯ ಗುಂಡ್ಲುಪೇಟಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಗುಂಡ್ಲುಪೇಟೆ ಪಟ್ಟಣದ ನಾಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದರು.
ಇದರಿಂದ ರೊಚ್ಚಿಗೆದ್ದ ಮೃತ ಕುಟುಂಬದ ಸಂಬಂಧಿಕರು ಆಸ್ಪತ್ರೆಯಲ್ಲಿನ ಸಿಬ್ಬಂದಿಗಳ ಮೇಲೆ ಅಲ್ಲೇ ಇದ್ದ ಆಕ್ಸಿಜನ್ ಸಿಲಿಂಡರ್ ನಿಂದ ಹಲ್ಲೆಗೆ ಮುಂದಾದರು.ಈ ವೇಳೆ ಆಸ್ಪತ್ರೆಯ ಕಿಟಕಿ ಮತ್ತು ಬಾಗಿಲು ಜಖಂಗೊಂಡಿದೆ.
ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೆ ಮುಂದಾಗಿದ್ದ ಮೃತ ಸೋಂಕಿತರ ಸಂಬಂಧಿ ಗಿರೀಶ್ ನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.








