ಬಾಗಲಕೋಟೆ | ಪೊಲೀಸ್ ಇಲಾಖೆ ಮೇಲೂ ಹೆಮ್ಮಾರಿ ವಕ್ರದೃಷ್ಟಿ
ಬಾಗಲಕೋಟೆ : ಬಾಗಲಕೋಟೆಯಲ್ಲಿ ಪೊಲೀಸ್ ಇಲಾಖೆ ಮೇಲೂ ಹೆಮ್ಮಾರಿ ವಕ್ರದೃಷ್ಟಿ ಬೀರಿದ್ದು, ಎರಡನೇ ಅಲೆಯಲ್ಲಿ ಈ ವರೆಗೂ ಜಿಲ್ಲೆಯಲ್ಲಿ 109 ಜನ ಪೊಲೀಸರಿಗೆ ವಕ್ಕರಿಸಿದೆ.
ಇದರಲ್ಲಿ ಚಿಕಿತ್ಸೆ ಫಲಿಸದೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 76 ಜನ ಪೊಲೀಸರು ಕ್ವಾರಂಟೈನ್ ನಲ್ಲಿದ್ದು, 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೂ 29 ಜನ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಈ ಬಗ್ಗೆ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಮಾಹಿತಿ ನೀಡಿದ್ದು, ಫ್ರಂಟ್ ಲೈನ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಸೋಂಕು ಅಂಟುತ್ತಿದೆ.
ವಾಹನ ಸವಾರರು ಅನಗತ್ಯ ಓಡಾಟ ತಡೆಯಲು ಬೈಕ್ ನಿಲ್ಲಿಸುವುದು, ಸೀಜ್, ದಂಡ ಹಾಕುವ ಕೆಲಸ ಮಾಡುತ್ತಿದ್ದಾರೆ.
ಸಾರ್ವಜನಿಕರು ಹೀಗೆಲ್ಲ ಮಾಡದೇ ಜವಾಬ್ದಾರಿಯಿಂದ ನಡೆದುಕೊಂಡರೆ ಪೊಲೀಸರಿಗೆ ಇಷ್ಟು ಕರೊನಾ ಸೋಂಕು ಹರಡುವ ಪ್ರಸಂಗ ಕಡಿಮೆ ಇರುತ್ತಿತ್ತು ಎಂದಿದ್ದಾರೆ.
ಈಗಾಗಲೇ ಮೂವರು ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಸಾರ್ವಜನಕರು ಕೋವಿಡ್ ನಿಯಮ ಅಳವಡಿಸಿಕೊಂಡು ತಾವು ಸುರಕ್ಷತೆಯಿಂದ ಇರಲಿ, ಇತರರು ಸುರಕ್ಷಿತವಾಗಿರಲು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
ಕೊರೊನ ಮಹಾಮಾರಿ :
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.










