ಕೊಳದಲ್ಲಿ ಮುಳುಗಿ ಆರು ಮಕ್ಕಳು ಸಾವು
ಪಂಜಾಬ್ : ಕೊಳದಲ್ಲಿ ಮುಳುಗಿ ಆರು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಪಂಜಾಬ್ ನ ಮಂಗಢ್ ಪ್ರದೇಶದಲ್ಲಿ ನಡೆದಿದೆ.
ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನೀರಿನಲ್ಲಿ ಆಟವಾಡುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.









