ಭಾರತದ ಕೊರೊನಾ ಪರಿಸ್ಥಿತಿ ಭೀಕರ : ವಿಶ್ವ ಆರೋಗ್ಯ ಸಂಸ್ಥೆ
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಎಲ್ಲವನ್ನೂ ಬುಡಮೇಲು ಮಾಡುತ್ತಿದೆ. ಯಾರ ಅಂದಾಜಿಗೂ ಸಿಗದೇ ಸಿಕ್ಕಸಿಕ್ಕವರ ದೇಹ ಹೊಕ್ಕುತ್ತಿರುವ ಕಿಲ್ಲರ್ ಕೊರೊನಾ ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.
ಈ ಮಧ್ಯೆ ಭಾರತದ ಸದ್ಯದ ಪರಿಸ್ಥಿತಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಭಾರತದ ಕೊರೊನಾ ಪರಿಸ್ಥಿತಿ ಭೀಕರವಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ಇನ್ನೂ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಚಿಂತಿಗೀಡು ಮಾಡಿವೆ ಆತಂಕ ವ್ಯಕ್ತಪಡಿಸಿದೆ.
ಡಬ್ಲ್ಯೂಎಚ್‍ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಭಾರತದಲ್ಲಿನ ಕೊರೊನಾ ಪರಿಸ್ಥಿತಿಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಂದಿಸುತ್ತಿದೆ.
ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ ಹಾಸ್ಪಿಟಲ್ ಗಳಿಗಾಗಿ ಟೆಂಟ್ ಗಳು, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಪೂರೈಕೆ ಮಾಡಿದೆ ಎಂದು ತಿಳಿಸಿದರು.
ಇನ್ನು ಕೊರೊನಾ ಬಗ್ಗೆ ಭಾರತದ ಇನ್ನೂ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಹಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಚಿಂತೆಗೀಡು ಮಾಡಿದೆ.
ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಸಾವುಗಳನ್ನು ನೋಡಿದರೆ ಭಯವಾಗುತ್ತಿದೆ ಎಂದು ಹೇಳಿದ್ದಾರೆ.










