ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯನವರೇ ನೀವು ಹಿಟ್ ವಿಕೆಟ್ ಆಗಿದ್ದೀರಿ : ಸಿದ್ದು ಗೂಗ್ಲಿಗೆ ಹೆಚ್ ಡಿಕೆ ಸಿಕ್ಸರ್

Mahesh M Dhandu by Mahesh M Dhandu
May 20, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯನವರೇ ನೀವು ಹಿಟ್ ವಿಕೆಟ್ ಆಗಿದ್ದೀರಿ : ಸಿದ್ದು ಗೂಗ್ಲಿಗೆ ಹೆಚ್ ಡಿಕೆ ಸಿಕ್ಸರ್

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ಟ್ವೀಟ್ ವಾರ್ ಶುರುವಾಗಿದೆ.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಟ್ವೀಟ್ಟರ್ ನಲ್ಲಿ ಕಿಡಿಕಾರಿದ್ದಾರೆ. ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕ್ರಿಕೆಟ್ ಬಾಷೆ ಬಳಸಿ ಟಾಂಗ್ ನೀಡಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ..
ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್ಸಿನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ.

ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ಸಿನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್ ಕೊಡಬೇಕೆನಿಸಿದೆ.

ಕೋವಿಡ್ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್ಸಿನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ.

ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ ಎಂದು ಕಾಲೆಳೆದಿದ್ದಾರೆ.

ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್ ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ಸಿನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್ಸಿನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ಧರಾಗಿಯೇ ಇದ್ದಾರೆ.

ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ.

ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ.ಇದು ನಿಮಗೆ ತಿಳಿದಿರಲಿ.ದೇಶದಲ್ಲಿ ಮೊದಲು ಕೋವಿಡ್ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಯಿತು.

ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು ಎಂದು ಕೆಂಡಕಾರಿದ್ದಾರೆ.

ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ.

ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ?

ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ.

ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ.

hd-kumaraswamy

ಆದರೆ, ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್ಸಿನ ಇಬ್ಬಗೆ ನೀತಿ.

ಸೋಂಕು ಹೆಚ್ಚುತ್ತಿದ್ದರೂ, ಲಾಕ್ ಡೌನ್ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್ ಪಡೆಯುವುದು ಇವರ ಉದ್ದೇಶ.

ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ.

ಲಸಿಕೆಗಾಗಿ 100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?.

ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಅದನ್ನು ಹೇಳುತ್ತಿರುವ ತಾವು ಗೌಡರ ಸಲಹೆಯಂತೆ ನಡೆದುಕೊಂಡಿದ್ದೀರೇ ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ ಎಂದು ಸರಣಿ ಟ್ವೀಟ್ ಗಳ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

corona cases

Tags: Corona VirusH D KUMARASWAMYSiddaramaiah
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram