ಹಿರಿಯ ರಾಜಕಾರಣಿ ಕೆ.ಆರ್, ಪೇಟೆ ಕೃಷ್ಣ ನಿಧನ
ಬೆಂಗಳೂರು : ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಅವರು ಹಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇಂದು ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ನಿಧನರಾಗಿದ್ದಾರೆ.
ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕರಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರು 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಕೆ.ಆರ್.ಪೇಟೆ ಕೃಷ್ಣ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.