ದೇಶ್ ವಾಸಿಯೋ… ಇಂದು ಸಂಜೆ 5ಕ್ಕೆ ದೇಶವನ್ನುದ್ದೇಶಿಸಿ ಮೋದಿ ಮಾತು modi
ನವದೆಹಲಿ : ದೇಶದಲ್ಲಿ ಕೊರೊನಾ ಆರ್ಭಟ ಕಡಿಮೆ ಆಗುತ್ತಿದೆ. ಇದರ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸದ್ಯ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಗಳ ಸಂಖ್ಯೆ ಕಡಿಮೆಯಾಗುತ್ತಿವೆ.
ಇಂದು ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷಕ್ಕೆ ಬಂದಿದೆ.
ಅಲ್ಲದೇ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೇರಿದ್ದ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ.
ಈ ಮಧ್ಯೆ ಇಂದು ಪ್ರಧಾನಿ ಮೋದಿ ಭಾಷಣ ಮಾಡಲು ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈಗಾಗಲೇ ಪ್ರಧಾನಿ ಮೋದಿ 2 ಬಾರಿ ಸಿಎಂಗಳ ಜೊತೆ ಸಭೆ ನಡೆಸಿದ್ದಾರೆ.
ಕಳೆದ ವರ್ಷ ಬಂದ ಮೊದಲ ಅಲೆಯಲ್ಲಿ ಮೋದಿ ಹಲವು ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು.
ಆದರೆ ಈ ಬಾರಿ ಎರಡು ಬಾರಿ ಮಾತ್ರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು.









