‘ವಿಕ್ರಾಂತ್ ರೋಣ ನೋಡ್ತಾಯಿದ್ರೆ ಜೀವ ನಡುಗತ್ತೆ’ : ರವಿಶಂಕರ್
ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾ ವಿಕ್ರಾಂತ್ ರೋಣನ ಅಬ್ಬರ ವಿಶ್ವದ ಅತಿ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಫಾದ ಮೇಲೂ ರಾರಾಜಿಸಿದೆ.. ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.. ಸಿನಿಮಾ ಯಾವಾಗ ರಿಲಿಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ.
ಸದ್ಯ ಸಿನಿಮಾದ ಸೂಟಿಂಗ್ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ತೊಡಗಿಕೊಂಡಿದೆ. ಈ ನಡುವೆ ಸಿನಿಮಾದ ಡಬ್ಬಿಂಗ್ ಕಾರ್ಯವನ್ನ ಮುಗಿಸಿರುವ ರವಿಶಂಕರ್ ಗೌಡ ಅವರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಟ್ವೀಟ್ ಮಾಡಿ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ. ‘ಇಡಿ ಸಿನಿಮಾ ನೋಡ್ತಾಯಿದ್ದರೆ ಜೀವ ನಡುಗತ್ತೆ. ನಿರ್ದೇಶಕ ಅನೂಪ್ ಬಂಡಾರಿಗೆ ಹಾಗೂ ನಿರ್ಮಾಪಕ ಜಾಕ್ ಮಂಜು ಸಾರ್ ಗೆ ಅಭಿನಂದಿಸಿ’ ಎಂದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.