ಮೋದಿ ಅಧಿಕಾರದಿಂದ ಇಳಿಯಲಿ : ಜೆಡಿಎಸ್ jds ಪ್ರತಿಭಟನೆ
ಉಡುಪಿ : ಬೆಲೆ ಏರಿಕೆ ನೀತಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಉಡುಪಿಯಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ರಜತಾದ್ರಿ ಮುಂಭಾಗದಲ್ಲಿ ಜಮಾಯಿಸಿದ ಜೆಡಿಎಸ್ ಪಕ್ಷದ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಮಾತನಾಡಿ, ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರ ತಜ್ಞರ ಅಭಿಪ್ರಾಯ ಸಲಹೆ ಪಡೆಯದೆ ದೇಶವನ್ನು ಮೃತ್ಯು ಕೂಪಕ್ಕೆ ತಳ್ಳಿದೆ.
ಬೆಲೆ ನಿಯಂತ್ರಣ ಮಾಡಲು ವಿಫಲವಾದ ಪ್ರಧಾನಿ ಮೋದಿ ಅಧಿಕಾರದಲ್ಲಿರಲು ಸಮರ್ಥರಲ್ಲ. ಸಾಂಕ್ರಾಮಿಕ ಕಾಲದಲ್ಲಿ ಬೆಲೆಯೇರಿಕೆ ಮಾಡಿ ಬಡವರ ಮಧ್ಯಮ ವರ್ಗದ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.









