ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ : ಸಚಿವ ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
June 30, 2021
in Newsbeat, State, ರಾಜ್ಯ
COVID-19: Karnataka govt mulling to issue green passes to identify fully vaccinated citizens saaksha tv
Share on FacebookShare on TwitterShare on WhatsappShare on Telegram

ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ : ಸಚಿವ ಡಾ.ಕೆ.ಸುಧಾಕರ್

ದಕ್ಷಿಣ ಕನ್ನಡ : ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

July 29, 2026
ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

July 29, 2026

ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಹಾಗೂ ಕೊಕ್ಕಡದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.

250 ಪಿಎಚ್ ಸಿಗಳನ್ನು ಪ್ರಾಯೋಗಿಕವಾಗಿ ಮೇಲ್ದರ್ಜೆಗೇರಿಸಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸವಲತ್ತುಗಳನ್ನು ನೀಡುವ ಉದ್ದೇಶವಿದೆ.

ಆಸ್ಪತ್ರೆಗಳ ಖಾಲಿ ಹುದ್ದೆ ತುಂಬಲು 1,763 ವೈದ್ಯರು ಹಾಗೂ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಂತರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರ ನೇಮಕವಾಗಿದೆ.

ಈ ಪೈಕಿ ಕನ್ನಡ ಜಿಲ್ಲೆಗೆ 26 ವೈದ್ಯರನ್ನು ನೀಡಲಾಗಿದೆ. ಹೊಸ ನೇಮಕಾತಿಯಲ್ಲಿ, 18 ತಜ್ಞರು, 40 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ದಕ್ಷಿಣ ಕನ್ನಡದ ಆಸ್ಪತ್ರೆಗಳಲ್ಲಿ ನೇಮಿಸಲಾಗಿದೆ. ಈ ಮೂಲಕ ರಾಜ್ಯದ ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದರು.

ಕೊಕ್ಕಡದಲ್ಲಿ 30 ಹಾಸಿಗೆಗಳ 4.8 ಕೋಟಿ ರೂ. ವೆಚ್ಚದ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟಿಸಲಾಗಿದೆ. ಇಲ್ಲಿಗೆ ಬೇಕಾದ ಸಲಕರಣೆಗಳನ್ನು ಒದಗಿಸಲಾಗುವುದು.

ಕೆಐಒಸಿಎಲ್ ಸಂಸ್ಥೆಯಿಂದ ಹಾಸಿಗೆಗಳನ್ನು ಇಲ್ಲಿಗೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಬಡವರು ಇಲ್ಲಿ ಪಡೆಯಬಹುದು ಎಂದು ತಿಳಿಸಿದರು.

Dr K Sudhakar

ಸಂಭವನೀಯ ಕೋವಿಡ್ 3 ನೇ ಅಲೆಗೆ ಪೂರಕವಾಗಿ ರಾಜ್ಯದಲ್ಲಿ 153 ಮಕ್ಕಳ ತಜ್ಞರನ್ನು ನೇಮಿಸಲಾಗಿದೆ. ತಾಲೂಕು ಆಸ್ಪತ್ರೆಗಳಿಗೆ ಕಳುಹಿಸಿರುವ ವೈದ್ಯರಿಗೆ ಮಕ್ಕಳ ಚಿಕಿತ್ಸೆ ಕುರಿತು ತರಬೇತಿ ನೀಡಲಾಗುವುದು.

ನರ್ಸ್ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ. ಜೊತೆಗೆ ಲಸಿಕಾಕರಣವೂ ಉತ್ತಮವಾಗಿ ನಡೆಯುತ್ತಿದೆ. ದಕ್ಷಿಣ ಕನ್ನಡದಲ್ಲೂ ಉತ್ತಮವಾಗಿ ನಡೆದಿದೆ.

ಕೆಲ ದಿನಗಳಿಂದ ಲಸಿಕಾ ಅಭಿಯಾನ ಮಂದಗತಿಯಲ್ಲಿ ಸಾಗಿದೆ. ಮುಂದಿನ ತಿಂಗಳಿಂದ ಹೆಚ್ಚು ಲಸಿಕೆ ಕಳುಹಿಸಿಕೊಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ ಎಂದರು.

ಶಾಲೆ, ಆರೋಗ್ಯ ಕೇಂದ್ರಗಳು ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಾಗಿದೆ. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 32 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾಂಪೌಂಡ್ ನಿರ್ಮಾಣ ನಡೆಯುತ್ತಿದೆ. ಮುಂದಿನ ವರ್ಷವೂ ಉಳಿದ ಕಾಮಗಾರಿ ನಡೆಯಲಿದೆ ಎಂದರು.

ಎಂಡೋಸಲ್ಫಾನ್ ನಿಂದ ಜನರು ತೊಂದರೆಗೊಳಗಾಗಿದ್ದಾರೆ. 60% ಕ್ಕಿಂತ ಹೆಚ್ಚು ಅಂಗವೈಕಲ್ಯ ಇರುವವರಿಗೆ ತಿಂಗಳಿಗೆ 3,000 ರೂ. ನೀಡಲಾಗುತ್ತಿದೆ.

59% ವರೆಗೆ ಒಂದೂವರೆ ಸಾವಿರ, 25% ಗಿಂತ ಕಡಿಮೆ ಇರುವವರಿಗೆ ಕೆಲ ರಿಯಾಯಿತಿ ಸೌಲಭ್ಯ ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಲು ಯತ್ನಿಸಲಾಗುವುದು ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಒಂದು ಕಾರ್ಯಕ್ರಮವಾಗಿದೆ. ಇದು ಕೆಲ ವರ್ಷಗಳವರೆಗೆ ಇದ್ದು, ನಂತರ ಮುಗಿಯುತ್ತದೆ. ಇದರಡಿ ಕೆಲಸಕ್ಕೆ ನೇಮಕ ಮಾಡುವಾಗಲೇ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದೆ. ಅದರಲ್ಲಿ ಶಾಶ್ವತ ನೇಮಕ ಕಷ್ಟವಾಗುತ್ತದೆ. ಇದರಲ್ಲಿ ಶೇ.60 ಕೇಂದ್ರ ಹಾಗೂ ರಾಜ್ಯ ಶೇ.40 ಅನುದಾನ ನೀಡುತ್ತದೆ ಎಂದರು.

Tags: Corona Virusdakshana kannadaDr K Sudakar
ShareTweetSendShare
Join us on:

Related Posts

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

by Shwetha
July 29, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್ ಈಗ ವಿಪಕ್ಷ...

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

by Shwetha
July 29, 2026
0

ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ಅದರಂತೆ, ನಗರ ಪ್ರದೇಶದಲ್ಲಿ ವಾರ್ಷಿಕ ₹50,000ಕ್ಕಿಂತ ಹೆಚ್ಚು ಶುಲ್ಕ...

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

by Shwetha
July 29, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸಮುದಾಯ ಭವನವೊಂದಕ್ಕೆ ತಮಿಳುನಾಡಿನ ನಾಯಕ ಪೆರಿಯಾರ್ ಹೆಸರಿಟ್ಟಿದ್ದ ಜಿಬಿಎ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,...

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

by Shwetha
July 29, 2026
0

ನೀಟ್ ಪರೀಕ್ಷೆ ವಿವಾದದ ಹಿನ್ನೆಲೆ ನಡೆದ ಪ್ರತಿಭಟನೆಗಳ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ 'ರಿಸರ್ವೇಶನ್ ಹಠಾವೋ ಆಂದೋಲನ' ಎಂಬ ಅಭಿಯಾನ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, 'ರಿಸರ್ವೇಶನ್...

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

by Shwetha
July 29, 2026
0

ಮುಂಬೈ: ದೇಶದ ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಯುವ ಸಮೂಹವನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram