ನಟ ಜಗ್ಗೇಶ್ Jaggesh ಹಿರಿಯ ಪುತ್ರ ಗುರುರಾಜ್ ಕಾರ್ ಅಪಘಾತ
ಚಿಕ್ಕಬಳ್ಳಾಪುರ : ನವರಸ ನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಕಾರ್ ಚಿಕ್ಕಬಳ್ಳಾಪುರದ ಬಳಿ ಅಪಘಾತಕ್ಕೀಡಾಗಿದೆ.
ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಲಗುರ್ಕಿ ಬೈ ಪಾಸ್ ಬಳಿ ಅಪಘಾತ ಸಂಭವಿಸಿದ್ದು, ಗುರುರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಿಂದಾಗಿ ಬಿಎಂಡಬ್ಲ್ಯೂ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಗುರುರಾಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಕುಟುಂಬಸ್ಥರು ಖಚಿತಪಡಿಸಿದ್ದಾರೆ. ಗುರುರಾಜ್ ಸೇಫ್ ಆಗಿದ್ದು, ಯಾವುದೇ ಪ್ರಾಣಪಾಯ ಆಗಿಲ್ಲ ಎಂದು ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ.









