ಕೋಲಾರ : ಬೆಸ್ಕಾಂ Bescom ಸಬ್ ಸ್ಟೇಷನ್ ನಲ್ಲಿ ಆಕಸ್ಮಿಕ ಬೆಂಕಿ
ಕೋಲಾರ: ಬೆಸ್ಕಾಂ ಸಬ್ ಸ್ಟೇಷನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಧಗಧಗಿಸಿರುವ ಘಟನೆ ಕೋಲಾರದ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.
ಟ್ರಾನ್ಸ್ ಫಾರ್ಮರ್ ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಭಾರೀ ಪ್ರಮಾಣದ ಹೊಗೆ ಎದ್ದಿದೆ. ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಬೆಂಸ್ಕಾಂ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಈ ಅವಘಡದಲ್ಲಿ ಟ್ರಾನ್ಸ್ ಫಾರ್ಮರ್ ಸೇರಿದಂತೆ ಎಲೆಕ್ಟ್ರಿಕ್ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಕೋಟ್ಯಂತರ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.