ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ Congress
ಬೆಂಗಳೂರು : ದೇಶದಲ್ಲಿ ಪದೇ ಪದೇ ಇಂಧನ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಇಂದು ರಾಜ್ಯ ಕಾಂಗ್ರೆಸ್ ಸೈಕಲ್ ಜಾಥಾ ನಡೆಸುತ್ತಿದೆ.
ನಗರದ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಸೈಕಲ್ ಚಾಥಾಗೆ ಚಾಲನೆ ದೊರೆತಿದೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಹಾಗೂ ಅಹ್ಮದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ಏರಿ ಮೆರವಣಿಗೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿದ ವ್ಯಕ್ತಿ ಸೈಕಲ್ ತುಳಿದದ್ದು ಗಮನ ಸೆಳೆಯಿತು.
ಇನ್ನೊಂದೆಡೆ ಕುದುರೆ ಟಾಂಗಾ ಮೆರವಣಿಗೆಯಲ್ಲಿ ಕಂಡು ಬಂತು. ಸಾಕಷ್ಟು ಸಂಖ್ಯೆಯಲ್ಲಿ ಯುವಕರು ಹಾಗೂ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಹಾಗೂ ಸಲೀಂ ಅಹ್ಮದ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.