ಸತ್ಯದ ಪರವಾಗಿ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ : ಸುಮಲತಾ
ಬೆಂಗಳೂರು : ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಮಲತಾ, ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಆಕ್ರೋಶ ಹೊರ ಹಾಕುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಪೆÇಲೀಸ್ ಭದ್ರತೆ ನೀಡಲಾಗಿದೆ.










