ಡಾ.ಚಿ.ನಾ.ರಾಮು ಅವರಿಗೆ “ರೈತಶ್ರೀ” ಪ್ರಶಸ್ತಿ
ಬೆಂಗಳೂರು : ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷರು, ಬಿಜೆಪಿ ಎಸ್ ಸಿ ಮೋರ್ಚಾ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಚಿ.ನಾ.ರಾಮು ಅವರಿಗೆ ರೈತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ನಾಗರಭಾವಿಯ ತೆರಿಗೆ ಭವನದಲ್ಲಿ ರೈತರ ಹಿತರಕ್ಷಣಾ ವೇದಿಕೆ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಈ ಸಮಾರಂಭದಲ್ಲಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷರು, ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಚಿ.ನಾ.ರಾಮು ಅವರಿಗೆ ” ರೈತಶ್ರೀ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇನ್ನು ಈ ವೇಳೆ ಹಿರಿಯ ನಟರಾದಂತಹ ಶಿವರಾಮ್ ಅವರು, ರೈತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.









