ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಸ್ಸಾಂ – ಮಿಜೋರಾಂ ಹಿಂಸಾಚಾರ : ಗಡಿ ಮರುವಿಂಗಡಣೆಯೇ ಪರಿಹಾರ-ಬಿಜೆಪಿ

Namratha Rao by Namratha Rao
July 28, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಅಸ್ಸಾಂ – ಮಿಜೋರಾಂ ಹಿಂಸಾಚಾರ : ಗಡಿ ಮರುವಿಂಗಡಣೆಯೇ ಪರಿಹಾರ-ಬಿಜೆಪಿ

ಅಸ್ಸಾಂ : ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ  ನಡೆದ ಗಲಭೆಯಲ್ಲಿ 5 ಪೊಲೀಸರು, ಓರ್ವ ನಾಗರೀಕ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಈ ನಡುವೆ ಪೊಲೀಸರು, ನಾಗರೀಕರ ಸಾವಿಗೆ ಸಂತಾಪ ಸೂಚಿಸಿರುವ ಅಸ್ಸಾಂ ಸಿಎಂ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದಾರೆ. ಈ ನಡುವೆ ಅಸ್ಸಾಂ ಜತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಗಡಿಗಳನ್ನು ಮರುವಿಂಗಡಣೆ ಮಾಡುವುದೇ  ಪರಿಹಾರ  ಎಂದು ಬಿಜೆಪಿ ಮುಖಂಡ , ಮಿಜೋರಾಂನ ಬಿಜೆಪಿ ಉಸ್ತುವಾರಿಯೂ ಆಗಿರುವ ಎಂ.ಕಿಕೋನ್ ಹೇಳಿದ್ದಾರೆ.

ಅಲ್ಲದೇ ಅಸ್ಸಾಂ ರಾಜ್ಯವು ತನ್ನೊಂದಿಗೆ ಗಡಿ ಹಂಚಿಕೊಂಡಿರುವ ಮಿಜೋರಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್‌ಗಳ ಜತೆ ಗಡಿ ತಕರಾರು ಹೊಂದಿದೆ. ಈ ಎಲ್ಲಾ ರಾಜ್ಯಗಳು ತಮ್ಮ ಗಡಿಯನ್ನು ಒತ್ತುವರಿ ಮಾಡಿವೆ ಎಂದು ಅಸ್ಸಾಂ ಆರೋಪಿಸಿದೆ. ಈ ಸಂಬಂಧ ಈ ಮೂರೂ ರಾಜ್ಯಗಳ ಜತೆಗೆ ಅಸ್ಸಾಂ ಸಂಘರ್ಷ ನಡೆಸಿದೆ. ಇದೇ ಮೇನಲ್ಲಿ ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಸಂಘರ್ಷ ನಡೆದಿತ್ತು. ಈ ಸಂಘರ್ಷದಲ್ಲಿ ಎರಡೂ ಕಡೆಯ ಹಲವು ಪೊಲೀಸರು ಗಾಯಗೊಂಡಿದ್ದರು. ಮೇಘಾಲಯದ ಜತೆ ಸೋಮವಾರ ಬೆಳಿಗ್ಗೆ ಅಸ್ಸಾಂ ಪೊಲೀಸರು ಘರ್ಷಣೆ ನಡೆಸಿದ್ದಾರೆ. ಈ ಎಲ್ಲಾ ಸಂಘರ್ಷಗಳನ್ನು ಕೊನೆಹಾಡಲು, ಗಡಿ ಮರುವಿಂಗಡಣೆಯೇ ಉಳಿದಿರುವ ಏಕೈಕ ಮಾರ್ಗ ಎಂದು ಕಿಕೋನ್ ಪ್ರತಿಪಾದಿಸಿದ್ದಾರೆ.

ಗಡಿ ಸಮಸ್ಯೆ ಕುರಿತು ಈ ಎಲ್ಲಾ ರಾಜ್ಯಗಳ ಪ್ರತಿನಿಧಿಗಳ ಜತೆಗೆ ಶನಿವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಾಂತಿ ಮಾತುಕತೆ ನಡೆಸಿದ್ದರು. ಮಾತುಕತೆ ನಡೆದ ಎರಡು ದಿನಗಳ ನಂತರ ಅಸ್ಸಾಂ ಪೊಲೀಸರು ಮತ್ತು ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಿಜೋರಾಂ ಮತ್ತು ಮೇಘಾಲಯ ಗಡಿಗಳಲ್ಲಿ ಒತ್ತುವರಿ ಆಗಿದೆ ಎನ್ನಲಾದ ಪ್ರದೇಶಗಳನ್ನು ಮರಳಿ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಹೋಗಿದ್ದರು. ಈ ವೇಳೆ ಮಿಜೋರಾಂ ಪೊಲೀಸರೊಂದಿಗೆ ನಡೆದ ಸಂಘರ್ಷದಲ್ಲಿ ಅಸ್ಸಾಂ ಪೊಲೀಸ್‌ನ ಆರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಮುಗಿದ ರಾಮುಲು ವನವಾಸ.. ಕಾರಜೋಳಗೆ ಜಾಕ್ ಪಾಟ್.. ಸಾಮ್ರಾಟರಿಗೆ ಪಟ್ಟ..

ಮಿಜೋರಾಂ ಜತೆ ಗಡಿ ಹಂಚಿಕೊಂಡಿರುವ ಅಸ್ಸಾಂನ ಗಡಿ ಜಿಲ್ಲೆಗಳ ಜನರು ಮಿಜೋರಾಂಗೆ ಆರ್ಥಿಕ ದಿಗ್ಬಂಧನದ ಬೆದರಿಕೆ ಒಡ್ಡಿವೆ. ಹಲವು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಈಗಾಗಲೇ ಆರ್ಥಿಕ ದಿಗ್ಬಂಧನ ಘೋಷಿಸಿವೆ. ಎರಡೂ ರಾಜ್ಯಗಳ ನಡುವೆ ಸಾರ್ವಜನಿಕ ಸಾರಿಗೆ ಬಸ್‌ಗಳು, ಖಾಸಗಿ ವಾಹನಗಳು ಮತ್ತು ಸರಕು ಸಾಗಣೆ ವಾಹನಗಳ ಸಂಚಾರವನ್ನು ಅಸ್ಸಾಂ ಗಡಿ ಜಿಲ್ಲೆಗಳ ಜನರು ತಡೆದು ನಿಲ್ಲಿಸಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳ ನಡುವೆ ರಸ್ತೆ ಸಂಪರ್ಕ ಸ್ಥಗಿತವಾಗಿದೆ. ಪೆಟ್ರೋಲ್‌-ಡೀಸೆಲ್, ಅಡುಗೆ ಅನಿಲ, ಆಹಾರ ಸಾಮಗ್ರಿ ಮತ್ತಿತರ ಅತ್ಯವಶ್ಯಕ ವಸ್ತುಗಳಿಗಾಗಿ ಮಿಜೋರಾಂ ಅಸ್ಸಾಂ ರಾಜ್ಯವನ್ನು ಅವಲಂಬಿಸಿದೆ. ಸಂಚಾರ ಸ್ಥಗಿತವಾದರೆ ಮಿಜೋರಾಂನಲ್ಲಿ ಈ ವಸ್ತುಗಳ ಕೊರತೆ ಉಂಟಾಗಲಿದೆ. ಮಿಜೋರಾಂ ಮೇಲೆ ಒತ್ತಡ ಹೇರುವ ತಂತ್ರವಾಗಿ ಅಸ್ಸಾಂ ಪ್ರಾದೇಶಿಕ ಪಕ್ಷಗಳು ಆರ್ಥಿಕ ದಿಗ್ಬಂಧನ ಹೇರಿವೆ.

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – 5 ಮಂದಿ ಸಾವು, 40 ಮಂದಿ ನಾಪತ್ತೆ

ಇನ್ನೂ ಅಸ್ಸಾಂ ಸರ್ಕಾರ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ. ಅಸ್ಸಾಂ ಮತ್ತು ಮಿಜೋರಾಂ ನಡುವಣ ಗಡಿ ಸಂಘರ್ಷದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 60ಕ್ಕಿಂತಲೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ , ಮಿಜೋರಾಮ್ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಹಿಂಸಾಚಾರದಲ್ಲಿ ಮೃತಪಟ್ಟ ಐವರು ಪೊಲೀಸರಿಗೆ ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಅವರು ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರವ ಅವರು, ಹಿಂಸಾಚಾರದಲ್ಲಿ ಪೊಲೀಸರು ಜೀವ ಕಳೆದುಕೊಂಡಿರುವುದು ಬಹಳಷ್ಟು ನೋವು ತಂದಿದೆ. ಸಿಲ್ಚಾರ್’ಗೆ ಭೇಟಿ ನೀಡಿ ಹುತಾತ್ಮರಾದ ಐವರು ಪೊಲೀಸರಿಗೆ ಗೌರವ ಸಲ್ಲಿಸಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾರಾಂತ್ಯದಲ್ಲಿ ಈ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿ ಮೇಘಾಲಯದಿಂದ ಹಿಂದಿರುಗಿದ ನಂತರ ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಇದಾದ ನಂತರ ಉಭಯ ರಾಜ್ಯಗಳ ನಡುವೆ ಘರ್ಷಣೆ ನಡೆದಿತು.

ಗುಡ್ ನ್ಯೂಸ್ : ಕೋವಿಶೀಲ್ಡ್‌ ಲಸಿಕೆಯಿಂದ ಶೇ.93ರಷ್ಟು ರಕ್ಷಣೆ..!

ಅಸ್ಸಾಂ ಮತ್ತು ಮೇಘಾಲಯದ ನಡುವಿನ ಗಡಿ ವಿವಾದ ಹಲವು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಎರಡು ದಿನಗಳ ಹಿಂದೆ ಶಿಲ್ಲಾಂಗ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಸಭೆಯಲ್ಲಿಯೂ ಈ ವಿಷಯದ ಚರ್ಚೆ ನಡೆದಿತ್ತು. ಅಷ್ಟಾದರೂ, ಸೋಮವಾರ ಘರ್ಷಣೆ ನಡೆದಿದೆ.

Tags: #saakshatvAssamBJPBorder conflict
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram