ಶಿವಮೊಗ್ಗ | ಕೆರೆಗೆ ಉರುಳಿದ ಬಸ್ : ಓರ್ವ ಸಾವು
ಶಿವಮೊಗ್ಗ : ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕೆರೆಗೆ ಬಸ್ ಉರುಳಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಕೆರೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಮೃತಪಟ್ಟಿದ್ದಾನೆ. ದೀಪು ಮೃತ ದುರ್ದೈವಿಯಾಗಿದ್ದಾನೆ.
ಘಟನೆಯಲ್ಲಿ ಸ್ಕೂಟಿಯ ಸವಾರರಿರು ಗಂಭೀರ ಗಾಯಗೊಂಡಿದ್ದರು. ಯುವಕರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದೀಪು ಮೃತಪಟ್ಟಿದ್ದಾನೆ.
ಇನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.









