ಟೋಕಿಯೊ ಒಲಿಂಪಿಕ್ಸ್ : ಭಜರಂಗ್ ಪೂನಿಯಾಗೆ ಕಂಚಿನ ಪದಕ
ಟೋಕಿಯೋ : ಒಲಿಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ಭಜರಂಗ್ ಪೂನಿಯಾ ಕಂಚಿನ ಪದಕಕ್ಕೆ ಮುಟ್ಟಿದ್ದಾರೆ.
ಒಲಿಂಪಿಕ್ಸ್ ನ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಜರಂಗ್ ಪೂನಿಯಾ ಕಂಚಿಗೆ ಕೊರಳೊಡ್ಡಿದ್ದಾರೆ.
ಕಜಕಿಸ್ತಾನದ ಡೌಲೆಟ್ ನಿಯಾಜ್ಬೆಕೊವ್ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಜರಂಗ್ ಪೂನಿಯಾ ಎದುರಾಳಿ ವಿರುದ್ಧ 8-0 ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪುನಿಯಾ ಸೆಮಿ ಫೈನಲ್ನಲ್ಲಿ ಸೋಲು ಕಂಡಿದ್ದರು. ಇಂದು ಕಂಚಿನ ಪದಕಕ್ಕಾಗಿ ಸೆಣಸಾಟ ನಡೆಸಿದ ಅವರು ಅದ್ಭುತ ಪ್ರದರ್ಶನ ನೀಡಿ ಕಂಚಿನ ಪದಕ ಗೆದ್ದಿದ್ದಾರೆ.








