ಕುಡಿದ ಮತ್ತಿನಲ್ಲಿ ಬೈಕ್ ಚಾಲನೆ : ಇಬ್ಬರು ಸಾವು bengaluru saaksha tv
ಬೆಂಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಸರಣಿ ಅಪಘಾತಗಳನ್ನು ಮಾಡಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ನಗರದ ಬನಶಂಕರಿಯ ಸುಚಿತ್ರ ಥಿಯೇಟರ್ ಬಳಿ ಘಟನೆ ಸಂಭವಿಸಿದ್ದು, ಅಮಲಿನಲ್ಲಿ ಅತೀ ವೇಗವಾಗಿ ಬಂದ ಕಾರು ಚಾಲಕ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.
ಬಳಿಕ ರಸ್ತೆ ಬದಿ ನಿಂತಿದ್ದ ಆಟೋಗೆ ಗುದ್ದಿದ್ದು, ನಂತರ ಜೆರಾಕ್ಸ್ ಅಂಗಡಿಯೊಂದರ ಮುಂಭಾಗದ ಶಟರ್ ಗೆ ಡಿಕ್ಕಿ ಹೊಡೆದಿದ್ದಾನೆ.
ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಕಾರಿನಿಂದ ಹೊರಗಡೆ ಕರೆತಂದಿದ್ದಾರೆ.
ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವೆರದಿದೆ.
ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಬನಶಂಕರಿ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.









