ಅಪ್ರಾಪ್ತ ಬಾಲಕಿಗೆ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿಗೆ ಧರ್ಮದೇಟು attempted rape saaksha tv
ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಿತ್ರದುರ್ಗದ ಹಿರಿರೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡಿದಿದೆ.
ಹಿರಿಯೂರು ಪಟ್ಟಣದ ಶುಗರ್ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಿರುವ ಸಾಲು ಮನೆಗಳ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಾಗಿದ್ದ ಶಿರಾ ಮೂಲದ ತಿಪ್ಪಯ್ಯ, 8 ವರ್ಷದ ಅಪ್ರಾಪ್ತ ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಕರೆದೊಯ್ದು, ಬಾಲಕಿಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಇದರಿಂದ ಗಾಬರಿಗೊಂಡು ಬಾಲಕಿ ಜೋರಾಗಿ ಕಿರುಚಿದ್ದು, ಬಾಲಿಕ ಅಳುತ್ತಿರುವ ಶಬ್ಧ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಆರೋಪಿಗೆ ಭರ್ಜರಿ ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.









