ರಾಜ್ಯಕ್ಕೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು
ಬೆಂಗಳೂರು : ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವುರ ಪುಸ್ತಕ ನೀಡುವ ಮೂಲಕ ಅವರನ್ನು ಸ್ವಾಗತಿಸಿದ್ದಾರೆ.
ಇಂದು ಕಾರ್ಯಕ್ರಮದ ನಿಮಿತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರನ್ನ ಸಿಎಂ ಬೊಮ್ಮಾಯಿ, ವಿಶೇಷ ಹಾರ, ಶಾಲು ಸೇರಿದಂತೆ ಪುಸ್ತಕ ನೀಡಿ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಶ್ರೀ ತಾವರಚಂದ್ ಗೆಹಲೊತ್, ಸಚಿವರಾದ ಡಾ. ಸಿ ಎನ್ ಅಶ್ವಥ್ ನಾರಾಯಣ್, ಸಂಸದರಾದ ಶ್ರೀ ಪಿ. ಸಿ. ಮೋಹನ ಉಪಸ್ಥಿತರಿದ್ದರು.
ಇತ್ತ ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.









