ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 3,832ಕ್ಕೆ ಏರಿಕೆ Black Fungus saaksha tv
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ತಗ್ಗುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ನ ಕಾಟ ಶುರುವಾಗಿದೆ.
ರಾಜ್ಯದಲ್ಲಿ ಕರಿಮಾರಿಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸುತ್ತಿವೆ.
ಸದ್ಯ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 3,832ಕ್ಕೆ ಏರಿಕೆಯಾಗಿದ್ದು, 437 ಮಂದಿ ಸಾವನ್ನಪ್ಪಿದ್ದಾರೆ.
ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಅತಿ ಹೆಚ್ಚು ಬ್ಲ್ಯಾಕ್ ಫಂಗಸ್ ಕೇಸ್ ಗಳು ಕಾಣಿಸಿಕೊಂಡಿವೆ.
ಬೆಂಗಳೂರಿನಲ್ಲಿ 1,206 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ.
ಜೊತೆಗೆ ಬ್ಲ್ಯಾಕ್ ಫಂಗಸ್ ಗೆ ಬೆಂಗಳೂರಿನಲ್ಲಿ 149 ಜನ ಸಾವನ್ನಪ್ಪಿದ್ದಾರೆ.
ಇನ್ನು ವಿಕ್ಟೋರಿಯಾದಲ್ಲಿ 209, ಬೌರಿಂಗ್ ಆಸ್ಪತ್ರೆ 433, ಕೆಸಿ ಜನರಲ್ 07 ಹಾಗೂ ಇಂದಿರಾಗಾಂಧಿ 3 ಕೇಸ್ ಪತ್ತೆಯಾಗಿದೆ.









