ವೀಕೆಂಡ್ ಕರ್ಫ್ಯೂಗೆ ಕೊಡಗಿನಲ್ಲಿ ಉತ್ತಮ ಸ್ಪಂದನೆ Weekend Curfew saaksha tv
ಕೊಡಗು : ಕೊರೊನಾ ನಿಯಂತ್ರಣಕ್ಕೆ ವಿಧಿಸಲಾಗಿರುವ ವೀಕೆಂಡ್ ಕರ್ಫ್ಯೂಗೆ ಕೊಡಗಿನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ.
ನೆರೆಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ.
ಹೀಗಾಗಿ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೊಡಗು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಈ ನಿಟ್ಟಿನಲ್ಲಿ ಕೊಡಗಿನಲ್ಲಿ ಇಂದು ಮತ್ತು ನಾಳೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಕರ್ಫ್ಯೂಗೆ ಉತ್ತಮ ಸ್ಪಂದನೆ ದೊರಕಿದೆ.
ಇಂದಿನಿಂದ ಕರ್ಫ್ಯೂ ಹಿನ್ನೆಲಯಲ್ಲಿ ಕೊಡಗಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಬೀಕೋ ಎನ್ನುತ್ತಿವೆ.
ಅಗತ್ಯ ವಸ್ತುಗಳ ಖರೀದಿಸಲು ಬೆರಳೆಣಿಕೆಯಷ್ಟು ಮಾತ್ರ ಜನ ಕಂಡು ಬರುತ್ತಿದ್ದಾರೆ.
ಅಗತ್ಯ ಸೇವೆಗಳ ಅಂಗಡಿಗಳು ಮಾತ್ರ ಸದ್ಯ ಓಪನ್ ಇದ್ದು, ಇನ್ನುಳಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಪೊಲೀಸರು ಗದ್ದಿನಗಣ್ಣಿಟ್ಟಿದ್ದಾರೆ.









