ಇಂದು-ನಾಳೆ ರಾಜ್ಯದಲ್ಲಿ ಮಳೆ ಸಾಧ್ಯತೆ Rain saaksha tv
ಬೆಂಗಳೂರು : ಇಂದು ಮತ್ತು ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಅದರ ಮುಂದುವರೆದ ಭಾಗವಾಗಿ ಇಂದು ಮತ್ತು ನಾಳೆ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮುಖ್ಯವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣ ತನ್ನ ಆರ್ಭಟ ತೋರಿಸಲಿದ್ದಾನೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ 9 ಜಿಲ್ಲೆಗಳಲ್ಲಿ ಆಗಸ್ಟ್ 24ರವರೆಗೆ ಅಧಿಕ ಮಳೆಯಾಗಲಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿನ ವಾತಾವರಣೆ ಮುಂದುವರೆದಿದ್ದು, ಸಂಜೆ ವೇಳೆಗೆ ತುಂತುರು ಮಳೆ ಬೀಳುವ ಸಾಧ್ಯತೆಗಳಿವೆ.









