ರಾಜ್ಯದಲ್ಲಿ ಇಂದು 1259 ಜನರಿಗೆ ಕೊರೊನಾ ದೃಢ Corona saaksha tv
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಇವತ್ತು ರಾಜ್ಯದಲ್ಲಿ ಹೊಸದಾಗಿ 1259 ಜನರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ.
ಇದೇ ಅವಧಿಯಲ್ಲಿ 1701 ಜನ ಹೆಮ್ಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಇಂದು 29 ಸೋಂಕಿತರು ಕೊರೊನಾದಿಂದ ಉಸಿರು ನಿಲ್ಲಿಸಿದ್ದಾರೆ. ರಾಜ್ಯದಲ್ಲಿನ್ನೂ 19,784 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಇವತ್ತು 295 ಜನರಿಗೆ ಸೋಂಕು ತಗುಲಿದೆ.
371 ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ. 7582 ಸಕ್ರಿಯ ಪ್ರಕರಣಗಳು ಇವೆ.









