ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ
ಚಿಕ್ಕಬಳ್ಳಾಪುರ : ವಿಶ್ವ ಪ್ರಸಿದ್ಧ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತವಾಗಿದೆ. ಪರಿಣಾಮ 10 ಅಡಿ ಆಳಕ್ಕೆ ಮುಖ್ಯ ರಸ್ತೆ ಕುಸಿದಿದೆ.
ಇದರಿಂದಾಗಿ ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.
ನಿನ್ನೆ ರಾತ್ರಿ ನಂದಿಬೆಟ್ಟದ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ.
ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ.
ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಸದ್ಯಕ್ಕೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲಿನೆ ನಡೆಸಿದ್ದಾರೆ.









