ವಿದ್ಯುತ್ ಕಂಪನಿಗಳ ಖಾಸಗೀಕರಣ ಬಗ್ಗೆ ಸುನೀಲ್ ಕುಮಾರ್ ಸ್ಪಷ್ಟನೆ
ಮೈಸೂರು : ವಿದ್ಯುತ್ ಕಂಪನಿಗಳ ಖಾಸಗೀಕರಣ ಬಗ್ಗೆ ಹಲವಾರು ವರ್ಷಗಳಿಂದ ಚರ್ಚೆಗಳು ನಡೆಯುತ್ತಲೇ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಇದೀಗ ಈ ಬಗ್ಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ವಿದ್ಯುತ್ ನಿಗಮಗಳ ಖಾಸಗೀಕರಣ ಸರ್ಕಾರದ ಮುಂದೆ ಇಲ್ಲ. ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ ಎಂದು ಸ್ಪಷಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ನಿಗಮಗಳ ಖಾಸಗೀಕರಣ ಸರ್ಕಾರದ ಮುಂದೆ ಇಲ್ಲ. ಕೇಂದ್ರದ ಬಿಲ್ ಬಗ್ಗೆ ನನಗೆ ಮಾಹಿತಿ ಇಲ್ಲ.
ವಿದ್ಯುತ್ ದರ ಏರಿಕೆ ಕೂಡ ಸರ್ಕಾರದ ಕೈಯಲ್ಲಿ ಇಲ್ಲ. ಇದು ವಿದ್ಯುತ್ ಸರಬರಾಜು ಮಾಡುವವರ ತೀರ್ಮಾನ. ಇದರ ಬಗ್ಗೆ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುವುದಿಲ್ಲ. ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ ಎಂದರು.
ಇದೇ ವೇಳೆ ಗಣೇಶೋತ್ಸವ ಆಚರಣೆ ವಿಚಾರವಾಗಿ ಮಾತನಾಡಿದ ಅವರು, ನಾನು ಸರ್ಕಾರದ ಸಚಿವನಾಗಿದ್ದೇನೆ. ನಮ್ಮ ಸರ್ಕಾರದ ಜವಾಬ್ದಾರಿ ಇರುವುದು ಕೊರೊನಾ ನಿಯಂತ್ರಣ ಮಾಡುವುದು.
ಕಾನೂನು ಮಾಡುವುದು ದೊಡ್ಡದಲ್ಲ ಜನ ಸಹಕಾರ ಕೊಡಬೇಕು. ಜನ ಸಹಕಾರ ಕೊಟ್ಟರೆ ಕೊರೊನಾ ನಿಯಂತ್ರಣ ಮಾಡಬಹುದು. ಹಾಗಂತ ಗಣೇಶೋತ್ಸವ ಅದ್ದೂರಿಯಾಗಿ ನಡೆಯಬಾರದಾ ಎಂದು ಪ್ರಶ್ನಿಸಿದರು.









