ಕೊರೊನಾ ನಿಯಮ ಗಾಳಿಗೆ ತೂರಿ ಬಿಜೆಪಿ ಬೃಹತ್ ರ್ಯಾಲಿ
ಮಂಡ್ಯ : ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಮಂಡ್ಯದಲ್ಲಿ ಬಿಜೆಪಿ ಬೃಹತ್ ರ್ಯಾಲಿ ನಡೆಸಿದೆ. ಸಭೆ ನಡೆಸಲು ಅನುಮತಿ ಇಲ್ಲದಿದ್ದರೂ ಬಿಜೆಪಿ ಸಭೆ ನಡೆಸಿದ್ದು, ಮಂಡ್ಯ ಜಿಲ್ಲೆಯಲ್ಲಿ ಪೊಲೀಸರ ಆದೇಶಕ್ಕೆ ಕಿಮ್ಮತ್ತೇ ಇಲ್ವಾ ಅನ್ನೋ ಪ್ರಶ್ನೆ ಮೂಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಭೆ ನಡೆಸಲು ಅನುಮತಿ ಇಲ್ಲ ಎಂದು ಮಂಡ್ಯ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದರು.
ಆದ್ರೆ ಪೊಲೀಸರ ಎಚ್ಚರಿಕೆಯನ್ನು ಧಿಕ್ಕರಿಸಿ, ಬಿಜೆಪಿ ನಾಯಕರು ರಾಜ್ಯ ಮಟ್ಟದ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.
ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಮಂಡ್ಯದಲ್ಲಿ ಬೈಕ್ ರ್ಯಾಲಿ ನಡೆಸಿದ್ದಾರೆ. ಅಲ್ಲದೆ ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಮಂಡ್ಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಭಾಗಿಯಾಗಿದ್ದರು.
ಈ ಸಭೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಮಂಡ್ಯ ಪೊಲೀಸರು ವಿಜಯ್ ಕುಮಾರ್ ಗೆ ನೋಟಿಸ್ ನೀಡಿದ್ದಾರೆ.









