ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು : ಐಸಿಯುನಲ್ಲಿ ಚಿಕಿತ್ಸೆ doddanna saaksha tv
ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಹಿರಿಯ ನಟ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೃದಯ ಬಡಿತ ಕಡಿಮೆಯಾಗಿ ಅವರಿಗೆ ಸುಸ್ತು ಕಾಣಿಕೊಂಡ ಕಾರಣ ದೊಡ್ಡಣ್ಣ ಅವರನ್ನು ಬುಧವಾರ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇವತ್ತು ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ಮುಂದುವರೆದಿರುವುದರಿಂದ ಮೂರು ದಿನಗಳ ಬಳಿಕ ಡಿಸ್ಚಾರ್ಜ್ ಮಾಡುವ ಸಾಧ್ಯತೆಗಳಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.









