ರಾಜ್ಯದ ಕರಾವಳಿ ಭಾಗದಲ್ಲಿ ಆ.30ರವರೆಗೆ ಮಳೆ ಸಾಧ್ಯತೆ Rain saaksha tv
ಬೆಂಗಳೂರು : ಆಗಸ್ಟ್ 30ರವರೆಗೂ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ.
ಅದರ ಮುಂದುವರೆದ ಭಾಗವಾಗಿ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ.
ಇದಲ್ಲದೇ ಆಗಸ್ಟ್ 30ರ ವರೆಗೂ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುವ ನಿರೀಕ್ಷೆಯಿದ್ದು, ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ.









