ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ, ಆತ್ಮಹತ್ಯೆಗೆ ಯತ್ನ..!
ಬೆಂಗಳೂರು : ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಗಲಗುಂಟೆಯ ಮಂಜುನಾಥ ನಗರದಲ್ಲಿ ನಡೆದಿದೆ.. ಉದಯ್ ಎಂಬಾತ ಯುವತಿಗೆ ಪ್ರೀತಿ ಹೆಸರಲ್ಲಿ ಕಿರುಕುಳ ನೀಡುತ್ತಾ ಕಡೆಗೆ ಆಕೆಯ ಕೊಲೆಗೆ ಯತ್ನಿಸಿದ್ದಾನೆ.. ಮಾರಣಾಂತಿಕ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.. ಆದ್ರೆ ಆತನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ..
ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಆರೋಪಿ ಉದಯ್ ಹಾಗೂ ಹಲ್ಲೆಗೊಳಗಾದ ಯುವತಿ ಒಂದೇ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಬಳಿಕ ಪ್ರತ್ಯೇಕ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಮಾಡುತ್ತಿದ್ದು, ಕಳೆದ ಮೂರು ವರ್ಷದಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.
ಆದ್ರೆ ಉದಯ್ ಇತ್ತೀಚಿಗೆ ಯುವತಿಗೆ ತನ್ನ ಪ್ರೀತಿ ಹೇಳಿಕೊಂಡಿದ್ದಾನೆ. ಆದ್ರೆ ಆಕೆ ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಾಗಿ ಯುವತಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಳಿಕ ಖುದ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.








