ಕೊರೊನಾ ಹೊಸ ಪ್ರಕರಣಗಳಲ್ಲಿ ಸ್ಥಿರತೆ – ವಿಶ್ವಸಂಸ್ಥೆ
ನವದೆಹಲಿ : ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… 
ಈ ನಡುವೆ 3ನೇ ಅಲೆಯ ಆತಂಕವೂ ಇದೆ.. ಇದೀಗ ಹೊಸ ಸೋಂಕು ಪ್ರಸರಣಗಳಲ್ಲಿ ಸ್ಥಿರತೆ ಕಂಡುಬರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. ಹೌದು ಕೋವಿಡ್–19 ಪಿಡುಗಿಗೆ ಸಂಬಂಧಿಸಿದ ಸಾಪ್ತಾಹಿಕ ವರದಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದೆ. ಹೊಸ ಕೋವಿಡ್–19 ಪ್ರಕರಣಗಳ ಸಂಖ್ಯೆ 45 ಲಕ್ಷ ಆಸುಪಾಸಿನಲ್ಲಿದ್ದು, ಈ ಹಂತಕ್ಕೇ ಸ್ಥಿರತೆ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಪಶ್ಚಿಮ ಪೆಸಿಫಿಕ್ ಪ್ರದೇಶದಲ್ಲಿ ಶೇ 20ರಷ್ಟು ಹಾಗೂ ಅಮೆರಿಕದಲ್ಲಿ ಶೇ 8ರಷ್ಟು ಹೆಚ್ಚಳ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.







