ಅತ್ಯಾಚಾರ ಎಸಗಿದವರನ್ನು ಗಲ್ಲಿಗೇರಿಸಿ : ಯತ್ನಾಳ್ yatnal saaksha tv
ಚಾಮರಾಜನಗರ : ಮೈಸೂರು ಗ್ಯಾಂಪ್ ರೇಪ್ ಪ್ರಕರಣದ ಆರೋಪಿಗಳನ್ನು ಕೂಡನೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಗ್ಯಾಂಗ್ ರೇಪ್ ಪ್ರರಕಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕು.
ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು.
ಇಂತಹ ಪ್ರಕರಣಗಳಲ್ಲಿ ಜಾಮೀನು ನೀಡಬಾರದು. ಕಾಲ ಮಿತಿಯಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಪ್ರರಕಣದ ಆರೋಪಿಗಳು ಪರಾರಿಯಾಗಲು ಯತ್ನಿಸಿದರೆ ಎನ್ ಕೌಂಟರ್ ಮಾಡಬೇಕು ಎಂದು ಅಭಿಪ್ರಾಯಪಟ್ಟ ಯತ್ನಾಳ್, ದುಷ್ಟ ಶಕ್ತಿಗಳಿಗೆ ಇಂತಹ ಶಿಕ್ಷೆಗಳು ಅನಿವಾರ್ಯ.
ವಿಶೇಷ ಕೋರ್ಟ್ ರಚನೆ ಮಾಡಿ ಶೀಘ್ರವೇ ದುಷ್ಟರಿಗೆ ಕಠಿಣ ಶಿಕ್ಷೆಯಾಗಬೇಕು, 6 ತಿಂಗಳಲ್ಲಿ ನಿರ್ಣಯವಾಗಬೇಕು ಎಂದು ಆಗ್ರಹಿಸಿದರು.