ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದುಬಿದ್ದಿದೆ : ಸಿದ್ದರಾಮಯ್ಯ Siddaramaiah saaksha tv
ಬೆಂಗಳೂರು : ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.
ಮೈಸೂರು ಅತ್ಯಾಚಾರ ಪ್ರರಕಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ.
ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಸಲಹೆ ನೀಡಿದ್ದಾರೆ.
ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.









