ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 44,658 ಮಂದಿಗೆ ಸೋಂಕು
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 496 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ವೈರಸ್ ನ ಸೋಂಕಿತರ ಸಂಖ್ಯೆ 3,26,03,188 ಕ್ಕೆ ಏರಿಕೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಈವರೆಗೆ 3.18 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಚೇತರಿಕೆ ಪ್ರಮಾಣ ಶೇ 97.60ರಷ್ಟಿದೆ.
ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,36,861 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ 3,44,899 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.








