ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ Mann Ki Baat
ನವದೆಹಲಿ : ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಮೂಲಕ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಶುರುವಾಗಲಿದೆ. ಇದು ಅವರ ಮಾಸಿಕ ರೇಡಿಯೋ ಕಾರ್ಯಕ್ರಮದ 80ನೇ ಆವೃತ್ತಿಯಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ತಾವು ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶ ಉದ್ದೇಶಿಸಿ ಭಾಷಣ ಮಾಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಅಂದಹಾಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ದೇಶದ ಬಗ್ಗೆ, ಸಾಧಕರ ಬಗ್ಗೆ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ.









