ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ –ಆರೇಂಜ್ ಅಲರ್ಟ್ ಘೋಷಣೆ..!
ಬೆಂಗಳೂರು : ನೆರೆಯ ಆಂಧ್ರಪ್ರದೇಶ, ಬಂಗಾಳ ಹಾಗೂ ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.. ಪರಿಣಾಮ ರಾಜ್ಯದ ಕರಾವಳಿ ಬಾಗ ಹಾಗೂ ಇನ್ನೂ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ.
ಇಂದಿನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುವ ಸೂಚನೆ ಸಿಕ್ಕಿದೆ. ಕರ್ನಾಟಕ ಹಾಗೂ ಕೇರಳದ ಮೇಲೆಯೇ ಹೆಚ್ಚು ಪರಿಣಾಮ ಬೀರಲಿದೆ. ಆಗಸ್ಟ್ 29 ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಅದ್ರಲ್ಲಿ 8 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಆಗಸ್ಟ್ 29ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 30ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.








