ಜನಪ್ರಿಯ ಹಾಡುಗಾರ ಫವಾದ್ ಕಿಶನಾಬಾದ್ ಹತ್ಯೆ ಗೈದ ತಾಲಿಬಾನ್
ಸ್ಮಶಾಣದಂತಾಗಿರುವ ಅಫ್ಘಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್ ರಾಕ್ಷಸರ ಕೈ ಕೆಳಗೆ ಸಿಲುಕಿ ಜನರು ಕ್ಷಣಕ್ಷಣಕ್ಕೂ ಸಾಯುವಂತಾಗಿದೆ. ಅಫ್ಗಾನಿಸ್ತಾನದಲ್ಲಿ ತನ್ನ ಸೇನೆ ಹಿಂಪಡೆಯುವ ಅಮೆರಿಕಾ ನಿರ್ಧಾರದಿಂದಾಗಿ ಬಾಲ ಮುದುರಿಕೊಂಡು ಮೂಲೆಯಲ್ಲಿದ್ದ ತಾಲಿಬಾನಿಗಳು ಇಡಿ ಅಫ್ಗಾನ್ ದೇಶವನ್ನೇ ಸ್ಮಶಾಣ ಮಾಡಿ ಜನರಿಗೆ ನರಕ ದರ್ಶನ ಮಾಡಿಸುತ್ತಿದ್ದಾರೆ..
ಈ ಪಾಪಿಗಳು ಈ ಹಿಂದೆ ಅನೇಕ ತಾರೆಗಳನ್ನ ಕಲಾವಿದರನ್ನ ಕೊಂದಿದ್ದಾರೆ.. ಜನರನ್ನ ನಗಿಸುತ್ತಿದ್ದರೆಂಬ ಕಾರಣಕ್ಕೆ ಅಫ್ಗಾನ್ ನ ಖ್ಯಾತ ಹಾಸ್ಯ ಕಲಾವಿಧನನ್ನ ಕೊಲೆ ಮಾಡಿದ್ದ ಪಾಪಿಗಳು ಇದೀಗ ಜನಪ್ರಿಯ ಹಾಡುಗಾರರನ್ನ ಹತ್ಯೆಗೈದು ವಿಕೃತಿ ಮೆರೆದಿದ್ದಾರೆ. ಜನಪ್ರಿಯ ಹಾಡುಗಾರ ಫವಾದ್ ಕಿಶನಾಬಾದ್ ಅವರನ್ನು ಉಗ್ರರು ಹತ್ಯೆ ಗೈದಿದ್ದಾರೆ.
ಅಫ್ಘಾನಿಸ್ತಾನದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದನ್ನು ತಾಲಿಬಾನಿಗಳು ನಿಷೇಧಿಸಿದ್ದಾರೆ. ಹಾಡುಗಾರ ಫವಾದ್ ಕಿಶನಾಬಾದ್ ತಾಲಿಬಾನ್‍ಗೆ ವಿರುದ್ದವಾಗಿ ಹಾಡುಗಳನ್ನು ಕಟ್ಟಿ ಹಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಯಲ್ಲಿ ತಾಲಿಬಾನಿಗಳು ಫವಾದ್‍ರನ್ನು ಹುಡುಕಿ ಹತ್ಯೆ ಮಾಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
#AFG “Fawad Andarabi a local singer was shot dead by Taliban in Kishaan village in Andarab district in Baghlan province.” Multiple residents from Anadarab tells me. pic.twitter.com/6UWKrRWanw
— BILAL SARWARY (@bsarwary) August 28, 2021








