ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ಸಿಂಪಲ್ ಮತ್ತು ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
August 30, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ಸಿಂಪಲ್ ಮತ್ತು ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

ಬೆಂಡೆಕಾಯಿ ಬಜ್ಜಿ

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಬೇಕಾಗುವ ಸಾಮಗ್ರಿಗಳು

ಬೆಂಡೆಕಾಯಿ – 1/4 ಕೆಜಿ
ಕಡಲೆ ಹಿಟ್ಟು – 1 ಕಪ್
ಸಣ್ಣ ರವೆ – 2 ಚಮಚ
ಕೆಂಪು ಮೆಣಸಿನ ಪುಡಿ – 1/2ಚಮಚ
ಚಾಟ್ ಮಸಾಲಾ – ಚಿಟಿಕೆಯಷ್ಟು
ಓಂಕಾಳು – ಚಿಟಿಕೆಯಷ್ಟು
ಅಡುಗೆ ಸೋಡಾ – ಚಿಟಿಕೆಯಷ್ಟು
ರುಚಿಗೆ ತಕ್ಕಷ್ಟು ಉಪ್ಪು
ಅಗತ್ಯವಿರುವಷ್ಟು ನೀರು
Saakshatv cooking tips how to prepare bendekayi bajji

ಮಾಡುವ ವಿಧಾನ
ಬೆಂಡೆಕಾಯಿಗಳನ್ನು ಚೆನ್ನಾಗಿ ತೊಳೆದು ಸ್ವಚ್ಛವಾದ ಒಣ ಬಟ್ಟೆಯಿಂದ ಒರೆಸಿಕೊಳ್ಳಿ. ನಂತರ ಬೆಂಡೆಕಾಯಿಗಳನ್ನು ಅರ್ಧಕ್ಕೆ ಕತ್ತರಿಸಿ ನಡುವೆ ಸೀಳಿ.
ಒಂದು ಪಾತ್ರೆಯಲ್ಲಿ ಕಡಲೆ ಹಿಟ್ಟು, ಸಣ್ಣ ರವೆ, ಕೆಂಪು ಮೆಣಸಿನ ಪುಡಿ, ಚಾಟ್ ಮಸಾಲಾ, ಓಂಕಾಳು, ಅಡುಗೆ ಸೋಡಾ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಮಿಶ್ರ ಮಾಡಿ. ನಂತರ ಬಜ್ಜಿಯ ಹಿಟ್ಟಿನ ಹದಕ್ಕೆ ಅಗತ್ಯವಿರುವಷ್ಟು ನೀರು ಸೇರಿಸಿ.‌
ಈಗ ಬಾಣಲೆಯಲ್ಲಿ ಎಣ್ಣೆಯನ್ನು ಕಾಯಿಸಿ, ನಂತರ ಕತ್ತರಿಸಿದ ಬೆಂಡೆಕಾಯಿಗಳನ್ನು ಒಂದೊಂದಾಗಿ ಹಿಟ್ಟಲ್ಲಿ ಅದ್ದಿ ಕಾಯ್ದ ಎಣ್ಣೆಯಲ್ಲಿ ಕರಿದು ತೆಗೆಯಿರಿ.

 

ಮಂಡಕ್ಕಿ ದೋಸೆ ಮತ್ತು ಈರುಳ್ಳಿ ಚಟ್ನಿ

ಮಂಡಕ್ಕಿ ದೋಸೆಗೆ ಬೇಕಾಗುವ ಸಾಮಗ್ರಿಗಳು

ದೋಸೆ ಅಕ್ಕಿ – 2 ಕಪ್
ಮಂಡಕ್ಕಿ – 2 1/2 ಕಪ್
ಮೊಸರು – 2 ಕಪ್
ರುಚಿಗೆ ತಕ್ಕಷ್ಟು ಉಪ್ಪು

ಈರುಳ್ಳಿ ಚಟ್ನಿಗೆ ಬೇಕಾಗುವ ಸಾಮಗ್ರಿಗಳು
ಈರುಳ್ಳಿಗಳು – 5
ತೆಂಗಿನಕಾಯಿ ತುರಿ – 1ಕಪ್
ಬೇಳೆ – 1 ಮುಷ್ಟಿ
ಕೆಂಪು ಮೆಣಸು – 10
ಬ್ಯಾಡಗಿ ಮೆಣಸು – 5
ಹುಣಸೆಹಣ್ಣಿನ ತಿರುಳು – 1 ಚಮಚ
ಬೆಲ್ಲ – ಸಣ್ಣ ತುಂಡು
ರುಚಿಗೆ ತಕ್ಕಷ್ಟು ಉಪ್ಪು

mandakki dosa

ದೋಸೆ ಮಾಡುವ ವಿಧಾನ

ಮೊದಲನೆಯದಾಗಿ ಅಕ್ಕಿಯನ್ನು ಮೊಸರಿನಲ್ಲಿ ಮತ್ತು ಮಂಡಕ್ಕಿಯನ್ನು ನೀರಿನಲ್ಲಿ 5 ರಿಂದ 6 ಗಂಟೆಗಳ ಕಾಲ ನೆನೆಸಿಡಿ. ನಂತರ ಮಿಕ್ಸಿ ಜಾರಿಗೆ ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ರುಬ್ಬಿ. ರುಬ್ಬಿದ ಹಿಟ್ಟನ್ನು ದೊಡ್ಡ ಪಾತ್ರೆಗೆ ವರ್ಗಾಯಿಸಿ ರಾತ್ರಿಯಿಡೀ ಹುದುಗಲು ಹಾಗೆ ಬಿಡಿ.
ಬೆಳಿಗ್ಗೆ ಹಿಟ್ಟಿಗೆ ಉಪ್ಪನ್ನು ಬೆರೆಸಿ ಚೆನ್ನಾಗಿ ಕಲಸಿ. ನಂತರ ತವಾ ಬಿಸಿ ಮಾಡಿ ದೋಸೆ ಹುಯ್ಯಿರಿ.

ಈರುಳ್ಳಿ ಚಟ್ನಿ ಮಾಡುವ ವಿಧಾನ

ಮೊದಲಿಗೆ ಪಾನ್ ನಲ್ಲಿ ಎಣ್ಣೆ ಬಿಸಿ ಮಾಡಿ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಬೇಳೆ, ಕೆಂಪು ಮೆಣಸು, ಬ್ಯಾಡಗಿ ಮೆಣಸು ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಮಿಕ್ಸಿ ಜಾರಿಗೆ ಇದನ್ನು ಸೇರಿಸಿ ತೆಂಗಿನಕಾಯಿ, ಉಪ್ಪು, ಬೆಲ್ಲ, ಹುಣಸೆಹಣ್ಣು ಸೇರಿಸಿ. ಚೆನ್ನಾಗಿ ರುಬ್ಬಿ.
ಬಳಿಕ ಚಟ್ನಿಗೆ ಸಾಸಿವೆ ಒಗ್ಗರಣೆ ‌ಕೊಡಿ.

ನಂತರ ಚಟ್ನಿಯೊಂದಿಗೆ ಬಿಸಿ ಬಿಸಿಯಾದ ದೋಸೆಯನ್ನು ಸವಿಯಿರಿ.

 

 

ಸಿಹಿ ಕುಂಬಳಕಾಯಿ ಹಲ್ವಾ

ಬೇಕಾಗುವ ಸಾಮಗ್ರಿಗಳು

ಸಿಹಿ ಕುಂಬಳಕಾಯಿ ತುರಿ – 3 ಕಪ್
ತುಪ್ಪ – 2 ಚಮಚ
ಬಾದಾಮಿ ಗೋಡಂಬಿ ಚೂರುಗಳು – ಸ್ವಲ್ಪ
ಹಾಲು – 1 ಕಪ್
ಬೆಲ್ಲದ ಪುಡಿ – 1ಕಪ್
ಏಲಕ್ಕಿ ಪುಡಿ – ಚಿಟಿಕೆಯಷ್ಟು

Saakshatv cooking recipe how to prepare sihi kumbalakayi halva
ಮಾಡುವ ವಿಧಾನ

ಮೊದಲಿಗೆ ದಪ್ಪ ತಳದ ಬಾಣಲೆಗೆ ತುಪ್ಪ ಹಾಕಿ ಬಿಸಿ ಮಾಡಿ. ನಂತರ ಬಾದಾಮಿ ಮತ್ತು ಗೋಡಂಬಿ ಚೂರುಗಳನ್ನು ಹಾಕಿ ಹುರಿದು ತೆಗೆದಿಟ್ಟುಕೊಳ್ಳಿ. ನಂತರ ಸಿಹಿ ಕುಂಬಳಕಾಯಿ ತುರಿಯನ್ನು ಸೇರಿಸಿ ಅದರ ಹಸಿವಾಸನೆ ಹೋಗುವವರೆಗೆ ಹುರಿದುಕೊಳ್ಳಿ. ಬಳಿಕ ಅದಕ್ಕೆ ಹಾಲು ಸೇರಿಸಿ ಮಿಶ್ರ ಮಾಡಿ. ನಂತರ ಕೈಯಾಡಿಸುತ್ತಾ ಸಣ್ಣ ಉರಿಯಲ್ಲಿ 5 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ನಂತರ ಬೆಲ್ಲದ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ಸಿಹಿ ಕುಂಬಳಕಾಯಿ ಮಿಶ್ರಣ ತಳ ಬಿಡುವವರಗೆ ಚೆನ್ನಾಗಿ ಬೆರೆಸಿ. ನಂತರ ‌ಏಲಕ್ಕಿ ಪುಡಿ ಸೇರಿಸಿ. ಈಗ ಹುರಿದಿಟ್ಟುಕೊಂಡ ಗೋಡಂಬಿ, ಬಾದಾಮಿ ಸೇರಿಸಿ. ‌ರುಚಿಯಾದ ಸಿಹಿ ಕುಂಬಳಕಾಯಿ ಹಲ್ವಾ ಸವಿಯಲು ಸಿದ್ಧವಾಗಿದೆ.

 

ಗೋಧಿ ಬಾದಾಮಿ ‌ಲಡ್ಡು

ಬೇಕಾಗುವ ಸಾಮಗ್ರಿಗಳು
ಗೋಧಿ ಹಿಟ್ಟು 1 ಕಪ್
ಬಾದಾಮಿ ಪುಡಿ – 1 ಕಪ್
ಒಣ ಖರ್ಜೂರ ಪುಡಿ – 3/4 ಕಪ್
ಏಲಕ್ಕಿ ಪುಡಿ – 1 ಚಮಚ
ಓಟ್ಸ್ ಪುಡಿ – 1/2 ಕಪ್
ಕಮಲದ ಬೀಜದ ಪುಡಿ – 1/2 ಕಪ್
ತೆಂಗಿನಕಾಯಿ ಹುಡಿ – 2 ಚಮಚ
Saakshatv cooking recipe
ಮಾಡುವ ವಿಧಾನ
ಮೊದಲಿಗೆ ತುಪ್ಪವನ್ನು ಬಿಸಿ ಮಾಡಿ. ನಂತರ ಗೋಧಿ ಹಿಟ್ಟು ಸೇರಿಸಿ ಮತ್ತು ಹಸಿ ವಾಸನೆ ಹೋಗುವ ತನಕ ಚೆನ್ನಾಗಿ ಹುರಿಯಿರಿ. ಬಣ್ಣದಲ್ಲಿ ಸ್ವಲ್ಪ ಬದಲಾವಣೆ ಆಗುತ್ತಿದ್ದಂತೆ ಬಾದಾಮಿ ಪುಡಿ, ಒಣ ಖರ್ಜೂರ ಪುಡಿ, ಏಲಕ್ಕಿ ಪುಡಿ, ಓಟ್ಸ್ ಪುಡಿ, ಕಮಲದ ಬೀಜದ ಪುಡಿ ಸೇರಿಸಿ. ಎಲ್ಲವನ್ನೂ ಚೆನ್ನಾಗಿ ಮಿಶ್ರಣವಾಗುವವರೆಗೆ ಬೆರೆಸಿ. ನಂತರ ಸ್ವಲ್ಪ ತಣ್ಣಗಾಗಿಸಿ. ಬಳಿಕ ಅಗತ್ಯವಿದ್ದರೆ ತುಪ್ಪವನ್ನು ಸೇರಿಸಿ ಚೆನ್ನಾಗಿ ನಾದಿ. ನಂತರ ಸಣ್ಣ ಸಣ್ಣ ಲಡ್ಡುಗಳನ್ನು ಮಾಡಿ ತೆಂಗಿನಕಾಯಿ‌ ಹುಡಿ ಮೇಲೆ ಉರುಳಿಸಿ. ಈಗ ರುಚಿಯಾದ ಗೋಧಿ ಬಾದಾಮಿ ‌ಲಡ್ಡು ಸವಿಯಲು ಸಿದ್ಧವಾಗಿದೆ.

 

ಅಕ್ಕಿಯ ಕೊಡುಬಾಲೆ

ಬೇಕಾಗುವ ಸಾಮಗ್ರಿಗಳು

ಅಕ್ಕಿ ಹಿಟ್ಟು 1 ಕಪ್
ನೀರು 2 ಕಪ್
ತೆಂಗಿನ ಎಣ್ಣೆ 2 ಟೀ ಚಮಚ
ಜೀರಿಗೆ 1/2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಹುರಿಯಲು ಎಣ್ಣೆ
Saakshatv cooking recipe how to prepare rice kodubale
ಮಾಡುವ ವಿಧಾನ

ಮೊದಲಿಗೆ ‌ದಪ್ಪ ತಳದ ಪಾತ್ರೆಯನ್ನು ತೆಗೆದುಕೊಂಡು ಬಿಸಿ ಮಾಡಿ. ‌ಅದಕ್ಕೆ ನೀರು, ಉಪ್ಪು, ತಾಜಾ ತೆಂಗಿನ ಎಣ್ಣೆ ಸೇರಿಸಿ. ಕುದಿಸಿ. ನಂತರ ಅಕ್ಕಿ ಹಿಟ್ಟು ಜೀರಾ ಸೇರಿಸಿ ಚೆನ್ನಾಗಿ ಬೆರೆಸಿ. 20 ನಿಮಿಷ ಬೇಯಿಸಿ.. ನಂತರ ಚೆನ್ನಾಗಿ ನಾದಿ ಹಿಟ್ಟನ್ನು ತಯಾರಿಸಿಕೊಳ್ಳಿ. ಚೆನ್ನಾಗಿ ಕಲಸಿ. ತಣ್ಣಗಾಗಲು ಬಿಡಿ. ನಂತರ ಆ ಹಿಟ್ಟಿನಿಂದ ಕೊಡುಬಾಲೆಗಳನ್ನು ತಯಾರಿಸಿ ಕೊಳ್ಳಿ. ಎಣ್ಣೆಯಲ್ಲಿ ಗರಿಗರಿಯಾಗುವವರೆಗೆ ಹುರಿಯಿರಿ. ರುಚಿಯಾದ ಅಕ್ಕಿಯ ಕೊಡುಬಾಲೆ ಸವಿಯಲು ಸಿದ್ಧವಾಗಿದೆ.

Tags: #saakshatvcoockingFood
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram