ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಕಬ್ರಾಸ್ತಾನ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಅವರ ಕುಟುಂಬ, ನಿಕಟವರ್ತಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ದೇಶಾದ್ಯಂತ ಕೊರೊನಾ ಲಾಕ್ ಡೌನ್ ಇದ್ದ ಕಾರಣ ಕುಟುಂಬ ಸದಸ್ಯರು ಸೇರಿದಂತೆ ಕೇವಲ 20 ಮಂದಿಗೆ ಮಾತ್ರವೇ ಅಂತಿಮ ವಿಧಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಒಂದರ ನಂತರ ಒಂದರಂತೆ 5-5ರ ಗುಂಪಿನಲ್ಲಿ ಅಂತಿಮ ದರ್ಶನ ಪಡೆಯಲು ಅವರಿಗೆ ಅವಕಾಶ ಕಲ್ಪಿಸಲಾಗಿತ್ತು.
Irrfan Khan’s demise is a loss to the world of cinema and theatre. He will be remembered for his versatile performances across different mediums. My thoughts are with his family, friends and admirers. May his soul rest in peace.
— Narendra Modi (@narendramodi) April 29, 2020
ಇನ್ನು ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
“ಇರ್ಫಾನ್ ಖಾನ್ ಅವರ ನಿಧನವು ಸಿನಿಮಾ ಮತ್ತು ರಂಗಭೂಮಿಯ ಜಗತ್ತಿಗೆ ಅಪಾರ ನಷ್ಟವನ್ನುಂಟುಮಾಡಿದೆ. ವಿವಿಧ ಮಾಧ್ಯಮಗಳಲ್ಲಿ ಅವರು ನೀಡಿದ ಬಹುಮುಖ ಪ್ರದರ್ಶನಕ್ಕಾಗಿ ಅವರು ಸದಾ ಸ್ಮರಣೀಯರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವಿದೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ” ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
“ಇರ್ಫಾನ್ ಖಾನ್ ನಿಧನವು ಸಿನಿಮಾ ಜಗತ್ತಿಗೆ ಮತ್ತು ಲಕ್ಷಾಂತರ ಚಲನಚಿತ್ರ ಪ್ರಿಯರಿಗೆ ದೊಡ್ಡ ನಷ್ಟವಾಗಿದೆ ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದ್ದಾರೆ.








