ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆಗೆ ಶರಣು
ವಿಜಯಪುರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ನಂತರ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ತೊರವಿ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಶ್ರೀದೇವಿ ಸಂತೋಷ್ ಈಟಿ ಕೊಲೆಯಾದ ಗೃಹಿಣಿಯಾಗಿದ್ದು, ಸಂತೋಷ ಈಟಿ ಪತ್ನಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ನಂತರ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.









