ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 30,941 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,941 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,27,68,880ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 350 ಜನ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,38,560ಕ್ಕೆ ಹೆಚ್ಚಿದೆ.
ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.53ಕ್ಕೆ ಏರಿಕೆಯಾಗಿದೆ.
ದೇಶದ ಸಕ್ರೀಯ ಸೋಂಕು ಪ್ರಮಾಣ 3,70,640 ಕ್ಕೆ ಹೆಚ್ಚಳವಾಗಿದೆ.
ಸೋಮವಾರ 13,94,573 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ ದೇಶದಲ್ಲಿ ಒಟ್ಟು 52,15,41,098 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ.
ದೇಶದಲ್ಲಿ 3,19,59,680 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಾವಿನ ದರವು ಶೇಕಡ 1.34 ರಷ್ಟಿದೆ.
ದೇಶದಲ್ಲಿ ಈವರೆಗೆ ಒಟ್ಟು 64.05 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.









