ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಸೋಂಕು ಪ್ರಕರಣಗಳು – ಒಂದೇ ದಿನ 42, 618 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 42, 618 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ ದೇಶದಾದ್ಯಂತ 330 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದೆ.
ಇನ್ನು ನಿನ್ನೆ 36,385 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ಏರಿದೆ.
ಚೇತರಿಕೆ ದರ 97.43 % ಇದೆ. ದೇಶದಲ್ಲಿ ಸದ್ಯ 4,05,681 ಸಕ್ರಿಯ ಕೇಸ್ ಗಳಿವೆ.