ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಹೊಸ ಸಿನಿಮಾದ ಟೈಟಲ್ ರಿವೀಲ್ ಮಾಡುವ ದಿನಾಂಕ ಘೋಷಣೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಭಾರೀ ಸದ್ದು ಮಾಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು.. ಅದಾದ ನಂತರ ಡಿ ಬಾಸ್ ಮುಂದಿನ ಸಿನಿಮಾಗಳಿಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.. ಇದೀಗ ದಾಸನ ಮುಂದಿನ ಸಿನಿಮಾದ ಬಗ್ಗೆ ಅಪ್ ಡೇಟ್ ಸಿಕ್ಕಿದೆ. ಡಿ ಬಾಸ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..
ಅಂದ್ಹಾಗೆ ಹೊಸ ಸಿನಿಮಾದ ಟೈಟಲ್ ರಿವೀಲ್ ಮಾಡುವ ದಿನಾಂಕ ಘೋಷಣೆ ಮಾಡಲಾಗಿದೆ. ಶೈಲಜಾ ನಾಗ್ ಅವರು ದಾಸನ ಮುಂದಿನ ಸಿನಿಮಾಗೆ ಬಂಡವಾಳ ಹೂಡ್ತಿದ್ದಾರೆ. ಸಿನಿಮಾದ ಟೈಟಲ್ ಘೋಷಣೆಯಾಗಬೇಕಾಗಿದೆ. ಇದು ದರ್ಶನ್ ನಟನೆಯ 55ನೇ ಸಿನಿಮಾವಾಗಿರಲಿದ್ದು, ಇದರ ಟೈಟಲ್ ಗಣೇಶನ ಹಬ್ಬ ಅಂದ್ರೆ ಸೆಪ್ಟೆಂಬರ್ 10ಕ್ಕೆ ರಿವೀಲ್ ಆಗಲಿದೆ. ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರ ಮೀಡಿಯಾ ಹೌಸ್ ಸ್ಟುಡಿಯೋ ಬ್ಯಾನರ್ ನಲ್ಲಿ ಈ ಸಿನಿಮಾ ಮೂಡಿಬರಲಿದೆ.








